ಉಡುಪಿ: ಸಿ ಎಂ ವಿರುದ್ದ ಪ್ರತಿಭಟನೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರತ್ನಿಸಿದ ಬಿಜೆಪಿ ಕಾರ್ಯಕರ್ತರು ಬಂಧನ ಗೊಂಡಿದ್ದಾರೆ.
ಅರ್ ಎಸ್ ಎಸ್ ಹಾಗೂ ಬಿಜೆಪಿ ಕಾರ್ಯಕರ್ತರನ್ನ ಉಗ್ರರೆಂದು ಕರೆದಿರುವ ಸಿ ಎಂ ಸಿದ್ದರಾಮಯ್ಯ ವಿರುದ್ದ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಉಡುಪಿಯ ಬ್ರಹ್ಮಗಿರಿ ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ದ ಅಕ್ರೋಷ ವ್ಯಕ್ತಪಡಿಸಿದರು.
ನಾವು ಬಿಜೆಪಿ ಕಾರ್ಯಕರ್ತರು ನಮ್ಮನ್ನ ಬಂಧಿಸಿ ಎಂದು ಘೋಷಣೆಯನ್ನ ಕೂಗಿಕೊಂಡು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂಧರ್ಭದಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನ ಬಂಧಿಸಿದರು.
ಸಿದ್ದರಾಮಯ್ಯ ವಿರುದ್ದ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ