ಬೈಂದೂರು : ನಾಡಿನಾದ್ಯಂತ ಗಣೇಶ ಚತುರ್ಥಿಯನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಗುತ್ತಿದೆ. ಕರಾವಳಿ ತೀರವಾದ ಬೈಂದೂರಿನಲ್ಲಿ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದೆ. ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.
ಬೈಂದೂರಿನ ವಿವಿಧೆಡೆ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ. ಬೈಂದೂರು ಸಾರ್ವಜನಿಕ ಗಣೇಶೋತ್ಸವದ ಗಣಪ, ಶಾಲೆಬಾಗಿಲು ಚಾಲಕ ಮಾಲಿಕರ ಸಂಘ, ತ್ರಾಸಿ ದೇವಾಡಿಗ ಕೆರಿ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ.