ಬೆಳಗಾವಿ/ಬಾಗಲಕೋಟ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ಉತ್ತರ ಕರ್ನಾಟಕದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಖಾನಾಪುರದ ಎಸಿಎಫ್ ಚಂದ್ರಗೌಡ ಪಾಟೀಲ್ ಅವರ ರಾಮತೀರ್ಥ ನಗರದ ನಿವಾಸ, ಬೈಲಹೊಂಗಲದ ನಿವಾಹ ಹಾಗೂ ಖಾನಾಪುರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಎಸಿಬಿ ಎಸ್ಪಿ ಅಮರನಾಥ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಇನ್ನು ಬಾಗಲಕೋಟೆಯ ಗ್ರಾಮೀಣ ನೀರು ಸರಬರಾಜು ಉಪವಿಭಾಗದ ಎಇಇ ಚಿದಾನಂದ ಮಿಂಚಿನಾಳ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಮಿಂಚನಾಳಗೆ ಸೇರಿದ ವಿಜಯಪುರ ನಗರದ ಸಾಯಿ ಪಾರ್ಕ್ನಲ್ಲಿರುವ ಎರಡು ನಿವಾಸದ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಶೀಲಿಸುತ್ತಿದ್ದಾರೆ. ವಿಜಯಪುರ ಹಾಗೂ ಬಾಗಲಕೋಟ ಎಸಿಬಿ ಅಧಿಕಾರಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ.