ಬಂಟ್ವಾಳ: ಇಲ್ಲಿನ ವಾಮದಪದವು ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ 17 ವಯೋಮಿತಿಯ ಬಾಲಕರ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಸಾಲೆತ್ತೂರು ಸರ್ಕಾರಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ರಿಜ್ವಾನ್ ಚಿನ್ನದ ಪದಕ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.