ಕುಕ್ಕೆಸುಬ್ರಹ್ಮಣ್ಯದ ಗಲಾಟೆ- ಚೈತ್ರಾ ಕುಂದಾಪುರ್ ಸಹಿತ ಏಳು ಮಂದಿ ವಶಕ್ಕೆ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ವಪೂಜೆ ಗೆ ಸಂಬಂಧಿಸಿದಂತೆ ನಡೆದ ವಾದ ವಿವಾದದಲ್ಲಿ ಹಿಂದೂ ಸಂಘಟನೆಯ ನಾಯಕರೆ ಹೊಡೆದಾಡಿಕೊಂಡ ಪ್ರಕರಣದಲ್ಲಿ ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಗಾಯಗೊಂಡಿದ್ದಾರೆ. ಘಟನೆ ಸಂಬಂಧಿಸಿ ಸಂಘ ಪರಿವಾರದ ನಾಯಕಿ ಚೈತ್ರಾ ಕುಂದಾಪುರ ಸಹಿತ ಏಳು ಮಂದಿಯನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. Share this on WhatsApp