ಉಡುಪಿ: ಉಡುಪಿಯ ಬೈಂದೂರಲ್ಲಿ ನಡೆದಿದ್ದ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅವನು ಯಾವನೂ ಶ್ರೀನಿವಾಸ ಶೆಟ್ಟಿ ನನಗೆ ಗೊತ್ತೇ ಇಲ್ಲ ಎಂದಿದ್ದರು. ಈ ಬಗ್ಗೆ ಉಡುಪಿಯಲ್ಲಿ ಹಾಲಾಡಿ ಕುಂದಾಪುರದ ಬಿಜೆಪಿ ಶಾಸಕ ಶ್ರೀನಿವಾಸ ಶೆಟ್ಟಿ ಅವರು ತಿರುಗೇಟು ನೀಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಶ್ರೀನಿವಾಸ ಶೆಟ್ಟಿ ಅವರು ಸಿದ್ದರಾಮಯ್ಯ ಏಕವಚನದಲ್ಲಿ ಹಗುರವಾಗಿ ಮಾತನಾಡುತ್ತಾರೆ ಏಕವಚನದಲ್ಲಿ ಮಾತನಾಡುವಷ್ಟು ನನಗೆ ಅವರ ಜೊತೆ ಸಲಿಗೆ ಇಲ್ಲ. ಸಲಿಗೆ ಇದ್ದವರಲ್ಲಿ ಅವರು ಮಾತನಾಡಲಿ. ಒಬ್ಬ ಮಾಜಿ ಮುಖ್ಯಮಂತ್ರಿಗೆ ಇದು ಶೋಭೆಯಲ್ಲ. ಹಲವಾರು ಬಾರಿ ನಾನು ಅವರನ್ನು ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಸೇರುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ರು ನಾನು ಸೇರುವುದಿಲ್ಲ ಅಂತ ನೇರವಾಗಿ ಹೇಳಿದ್ದೆ. ನಾನು ಯಾರು ಅಂತ ಗೊತ್ತಿಲ್ಲದೆ ಅವರು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾದ್ರಾ? ನನ್ನ ವ್ಯಕ್ತಿತ್ವ ಗೊತ್ತಿಲ್ಲದೆ ಏನೂಂತ ಪಕ್ಷಕ್ಕೆ ಸೇರಿಸಲು ಮುಂದಾಗಿದ್ದರು. ಸೊರಕೆ, ಪ್ರಮೋದ್ ಮಧ್ವರಾಜ್ , ಅಭಯಚಂದ್ರ ಜೈನ್ ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದಿದ್ದರು. ನಾನು ಯಾರು ಅಂತ ಗೊತ್ತಿಲ್ಲದೆ ಇಷ್ಟೆಲ್ಲಾ ಮಾಡಿದ್ರಾ ? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಮಾತಿಂದ ಮತದಾರರಿಗೆ ಬಹಳ ಬೇಸರ ಆಗಿದೆ. ನಾನು ರಾಜಕೀಯವಾಗಿಯೂ ಹಗುರವಾಗಿ ಮಾತನಾಡುವ ವ್ಯಕ್ತಿ ಅಲ್ಲ.ಸಿದ್ದರಾಮಯ್ಯ ಜನವೇ ಹಗೂರ. ಹಗೂರ ಇದ್ದಾಗ ಇಂತಹ ಹಗೂರ ಮಾತು ಬರುತ್ತದೆ. ಒಂದು ಹುದ್ದೆಗೆ ಹೋದ ಕೂಡಲೇ ದೊಡ್ಡ ಮನುಷ್ಯ ಆಗಲ್ಲ. ಆತನ ಮಾತು ನಡವಳಿಗೆ ಸರಿ ಇರಬೇಕು . ನಾನು ಸಿದ್ದರಾಮಯ್ಯ ನ ಆಶೀರ್ವಾದದಲ್ಲಿ ಬದುಕಿದವ ಅಲ್ಲ. ನನಗೆ ಜನ 56 ಸಾವಿರ ಮತದ ಅಂತರದಲ್ಲಿ ಗೆಲ್ಲಿಸಿದ್ದಾರೆ. ನನಗೆ ಸಿದ್ದರಾಮಯ್ಯ ಆಶೀರ್ವಾದ ಬೇಕಾಗಿಲ್ಲ.ಕುಂದಾಪುರ ಕ್ಷೇತ್ರದ ಜನರ ಪ್ರೀತಿ ಸಾಕು ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.