ನವದೆಹಲಿ: ಪೊಲೀಸ್ ವೇಷದಲ್ಲಿದ್ದ ಇಬ್ಬರು ಕಾಮುಕರು ಬಂದು ಯುವತಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಪೊಲೀಸರಂತೆ ಬಂದಂತಹ ಕಾಮುಕರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಸದ್ಯಕ್ಕೆ ಯುವತಿ ಹಾಗೂ ಸಂಬಂಧಿ ಕನ್ಜಾವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಭಾನುವಾರ ರಾತ್ರಿ ಸಂಬಂಧಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಯುವಕರು ಪೊಲೀಸ್ ವೇಷದಲ್ಲಿ ಬಂದು ನನ್ನೊಂದಿಗೆ ಮಾತನಾಡುತ್ತಿದ್ದರು. ಬಳಿಕ ಇಬ್ಬರಲ್ಲಿ ಒಬ್ಬನು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇನ್ನೊಬ್ಬ ನನ್ನ ಜೊತೆ ಇದ್ದ ಅಪ್ರಾಪ್ತ ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾಳೆ.
ಸದ್ಯಕ್ಕೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.