ಲಕ್ನೋ: ವೈದ್ಯನೊಬ್ಬ ಅಪ್ರಾಪ್ತ ಬಾಲಕಿಯನ್ನು ಕೂಡಿಹಾಕಿ ಆಕೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪ್ರಕರಣ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ವಿನೋದ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಯು ಬಾಲಕಿಗೆ ಚಿಕಿತ್ಸೆ ಹಾಗೂ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು, ಸಣ್ಣ ಕೋಣೆಯೊಂದರಲ್ಲಿ ಕೂಡಿಹಾಕಿದ್ದ. ಅಲ್ಲದೇ ಹಲವು ದಿನಗಳಿಂದ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆಯ ಕುರಿತು ಬಾಲಕಿ ವೈದ್ಯನಿಂದ ತಪ್ಪಿಸಿಕೊಂಡು ಬಂದ ಮೇಲೆ ಪೋಷಕರಿಗೆ ತಿಳಿಸಿದ್ದಾಳೆ.
ವಿಷಯ ತಿಳಿದ ಬಳಿಕ ಬಾಲಕಿಯ ಹೆತ್ತವರು ಆರೋಪಿ ಮೇಲೆ ದೂರು ದಾಖಲಿಸಲು ಸ್ಥಳೀಯ ಪೊಲೀಸ್ ಠಾಣೆಗೆ ಹೋದಾಗ, ಪೊಲೀಸರು ದೂರು ಪಡೆಯಲು ನಿರಾಕರಿಸಿ ಆರೋಪವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ.
ನಂತರ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ತೆರಳಿ ದೂರು ನೀಡಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಬಾಲಕಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.