ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಬೋಧನ ಶುಲ್ಕ ರದ್ದತಿಗೆ ಮನವಿ

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ, ಸೆ.17: ಅಲ್ಪಸಂಖ್ಯಾತ ಮುಸ್ಲಿಂ ಪ್ರವರ್ಗ (2ಬಿ) ಮತ್ತು ಕ್ರಿಶ್ಚನ್ ಪ್ರವರ್ಗ (3ಬಿ) ಪಂಗಡದ ವಿದ್ಯಾರ್ಥಿಗಳಿಗೆ ಈ ಹಿಂದೆ ಬೋಧನಾ ಶುಲ್ಕ ಮತ್ತು ಪರೀಕ್ಷಾ ಶುಲ್ಕ ಪಾವತಿಯಲ್ಲಿ ಬದಲಾವಣೆ ಮಾಡಲಾಗಿದ್ದು ಶೈಕ್ಷಣಿಕ ವರ್ಷದ ಮಧ್ಯ ದಲ್ಲಿ ಶುಲ್ಕಗಳನ್ನು ಪಾವತಿಸಲು ಕಷ್ಟ ಸಾಧ್ಯವಾದುದರಿಂದ ಹಿಂದಿನ ವರ್ಷದ ರಿಯಾಯಿತಿ ಆದೇಶವನ್ನು ಮುಂದುವರಿಸಬೇಕು ಎಂದು ಉಡುಪಿ ಜಿಲ್ಲಾ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ತಹಶೀಲ್ದಾರರಿಗೆ ನೀಡಿದ ಮನವಿಯಲ್ಲಿ ಒತ್ತಾಯಿಸಿದೆ.

ಸರಕಾರದ ಹೊಸ ಆದೇಶವನ್ನು ಖಂಡಿಸಿ ಸಂಘಟನೆ ಈಗಾಗಲೇ ಬಸರೂರಿನ ಶಾರದಾ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದೆ. ಒಂದು ವೇಳೆ ಈ ರಿಯಾಯಿತಿ ಶುಲ್ಕ ಜಾರಿಯಾಗದಿದ್ದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಸೇರಿಸಿ ಪ್ರತಿಭಟನೆ ನಡೆಸಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

About ಗ.ಕ ಮಂಗಳೂರು ವಾರ್ತಾ ವಿಭಾಗ