ಮೂಡುಬಿದಿರೆ: ಜೆಡಿಎಸ್‌ನಿಂದ ಪ್ರತಿಭಟನೆ

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

ಮೂಡುಬಿದಿರೆ, ಸೆ.20: ಕೇಂದ್ರ ಸರಕಾರ ಡೀಸೆಲ್ ಬೆಲೆ ಏರಿಸಿರುವ ಹಾಗೂ ಎಲ್‌ಪಿಜಿ ಸಿಲಿಂಡರ್‌ಗೆ ಮಿತಿ ವಿಧಿಸಿರುವುದರ ವಿರುದ್ಧ ಮೂಡುಬಿದಿರೆ ಜೆಡಿಎಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಮಾತನಾಡಿ, ಡೀಸೆಲ್ ಬೆಲೆಯೇರಿಕೆ ಹಾಗೂ ಎಲ್‌ಪಿಜಿಗೆ ಮಿತಿ ಅಳವಡಿಸುವುದನ್ನು ಖಂಡಿಸಿ, ಡೀಸೆಲ್ ಬೆಲೆಯೇರಿಕೆಯಿಂದ ಪರೋಕ್ಷವಾಗಿ ದೈನಂದಿನ ವಸ್ತುಗಳ ಬೆಲೆಯೇರಿಕೆಯಾಗಿ ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದರು. ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ರಾಜ್ಯ ಯುವಜನತಾದಳದ ಪ್ರಧಾನ ಕಾರ್ಯದರ್ಶಿ ಅಶ್ವಿನಿ ಜೆ.ಪಿರೇರಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿವಾಕರ ಶೆಟ್ಟಿ, ಪುರಸಭಾ ಸದಸ್ಯರಾದ ಶಿವರಾಜ್ ರೈ, ಹನೀಫ್ ಅಲಂಗಾರು ಮತ್ತಿತರರು ಉಪಸ್ಥಿತರಿದ್ದರು.

ಸಾವಿರ ಕಂಬದ ಬಸದಿಯಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ತಮ್ಮ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಮನವಿಪತ್ರವನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಯಿತು.

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

About ಗ.ಕ ಮಂಗಳೂರು ವಾರ್ತಾ ವಿಭಾಗ