ಪುತ್ತೂರು ತಾಲೂಕಿನಾದ್ಯಂತ ಭಾರೀ ಬೆಂಬಲ

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

ಪುತ್ತೂರು, ಸೆ.20: ತೈಲ ಬೆಲೆ ಏರಿಕೆಯನ್ನು ವಿರೋಧಿಸಿ ಗುರುವಾರ ನಡೆದ ಭಾರತ್ ಬಂದ್‌ಗೆ ಪುತ್ತೂರಿನಲ್ಲಿ ಪೂರ್ಣ ಬೆಂಬಲ ವ್ಯಕ್ತವಾಗಿದೆ. ಪುತ್ತೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಎಲ್ಲಾ ಅಂಗಡಿ ಮುಂಗ್ಗಟ್ಟುಗಳನ್ನು ಮುಚ್ಚಲಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿತ್ತು.

ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಯಾವುದೇ ಸರಕಾರಿ ಹಾಗೂ ಖಾಸಗಿ ಬಸ್ಸುಗಳು, ಹಾಗೂ ಇತರ ವಾಹನಗಳ ಓಡಾಟ ವಿರಲಿಲ್ಲ. ಸರಕಾರಿ ಕಚೇರಿಗಳು ಎಂದಿನಂತೆ ತೆರೆದಿದ್ದರೂ ಸಾರ್ವಜನಿಕರು ಆಗಮಿಸಿ ರಲಿಲ್ಲ. ನಗರದಲ್ಲಿ ಅಂಗಡಿಗಳು ಮುಚ್ಚಿದ್ದು ಬಿಕೋ ಅನ್ನುತ್ತಿತ್ತು. ತಾಲೂಕಿನ ಹಲವು ಕಡೆಗಳಲ್ಲಿ ಸಾರ್ವ ಜನಿಕ ಗಣೇಶೋತ್ಸವ ಕಾರ್ಯ ಕ್ರಮಗಳು ನಡೆಯುತ್ತಿದ್ದು, ಬಂದ್ ನಿಂದಾಗಿ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು.

ಕಡಬ:  
ಕೇಂದ್ರ ಸರಕಾರದ ವಿರುದ್ಧ ಎನ್‌ಡಿಎ ಮಿತ್ರಪಕ್ಷಗಳು ಸೆ.20 ರಂದು ಕರೆ ನೀಡಿದ್ದ ಭಾರತ್ ಬಂದ್ ಕಡಬ ಪರಿಸರದಲ್ಲಿ ಯಶಸ್ವಿಯಾಗಿದೆ. ಬೆಳಗ್ಗೆ ಕಡಬ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಗ್ಯಾಸ್ ಸಿಲಿಂಡರ್ ಎತ್ತಿ ಹಿಡಿದು ಆಕ್ರೋಶ ವ್ಯಕ್ತಪಡಿಸಿ, ರಸ್ತೆ ತಡೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

About ಗ.ಕ ಮಂಗಳೂರು ವಾರ್ತಾ ವಿಭಾಗ