ಚಿಕ್ಕೋಡಿ: ಕೃಷ್ಣಾ ಒಳ ಹರಿವು ಹೆಚ್ಚಳ

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆಯಾದರೂ ಅಲ್ಲಿಯ ರಾಜಾಪುರ ಸೇರಿದಂತೆ ವಿವಿಧ ಬ್ಯಾರೇಜ್‌ಗಳಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣ ಶುಕ್ರವಾರ ಒಂದು ಲಕ್ಷ ಕ್ಯೂಸೆಕ್ ದಾಟಿದೆ.

ಇದರಿಂದ ತಾಲ್ಲೂಕಿನ ಕೆಳ ಮಟ್ಟದ ಏಳೂ ಸೇತುವೆಗಳು ಮುಳುಗಡೆ ಸ್ಥಿತಿಯಲ್ಲಿಯೇ ಇದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಆದರೆ ಶುಕ್ರವಾರ ಕೃಷ್ಣಾ ಮತ್ತು ಉಪನದಿಗಳ ಹರಿವಿನಲ್ಲಿ ಹೆಚ್ಚಿನ ಏರಿಕೆ ಕಂಡುಬಂದಿಲ್ಲ ಎಂದು ತಾಲ್ಲೂಕು ಆಡಳಿತ ತಿಳಿಸಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ಮಧ್ಯಾಹ್ನದ ನಂತರ 4-5 ತಾಸು ತಾಲ್ಲೂಕಿನಾದ್ಯಂತ ರಭಸದ ಮಳೆ ಆಗಿದ್ದರಿಂದ ಹಳ್ಳಗಳು ಉಕ್ಕಿ ಹರಿದು, ಇಲ್ಲಿಯ ಪೋಸ್ಟ್ ಚೆಂಡಿಯಾ, ಅರಗಾ ಗ್ರಾಮಗಳಲ್ಲಿನ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿತ್ತು.

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)
ಅಶ್ವಿನಿ

About ಅಶ್ವಿನಿ