ಸಿಬಿಐ ತನಿಖೆಗೆ ‘ಮುಡಾ’ ಅಕ್ರಮ; ಅಂಬರೀಶ್ ಸೇರಿ ಹಲವರ ಹೆಸರು ಪ್ರಸ್ತಾಪ

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

ambi

ವಕೀಲ ಸತ್ಯಾನಂದ ಸಲ್ಲಿಸಿದ್ದ ದೂರು, ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ಅಕ್ರಮವಾಗಿದೆ ಎಂಬ ದೂರು ಕೇಳಿಬಂದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ 1821 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮವಾಗಿದೆ ಎಂದು ಮುಡಾ ಆಯುಕ್ತ ಕೆ.ಮಥಾಯ್ ಅವರು, ವರದಿ ನೀಡಿದ ಹಿನ್ನಲೆಯಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ. ಪ್ರಕರಣದಲ್ಲಿ ಪ್ರಮುಖವಾಗಿ ವಸತಿ ಸಚಿವ ಮತ್ತು ನಟ ಅಂಬರೀಶ್ ಅವರ ಹೆಸರು ಬಲವಾಗಿ ಕೇಳಿಬರುತ್ತಿದ್ದು, ತಮ್ಮ ಪ್ರಭಾವವನ್ನು ಬಳಸಿ ಅವರು ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಅಂಬರೀಶ್ ಮಾತ್ರವಲ್ಲದೆ ಮಂಡ್ಯ ಜಿಲ್ಲೆಯ ಇತರೆ ಪ್ರಭಾವಿಗಳ ಹೆಸರುಗಳು ಕೂಡ ಹಗರಣದಲ್ಲಿ ಕೇಳಿಬರುತ್ತಿದ್ದು, ಫಲಾನುಭವಿಗಳಿಗೆ ನಿವೇಶನ ನೀಡದೇ ಪ್ರಭಾವಿಗಳಿಗೆ ಹಂಚಿಕೆ ಮಾಡಲಾಗಿದೆ. ಹೀಗಾಗಿ ಸೂಕ್ತ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಇನ್ನೆರಡು ಮೂರು ದಿನಗಳಲ್ಲಿ ಎಫ್‌ಐಆರ್ ದಾಖಲಿಸುವಂತೆ ಸಿಬಿಐ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವಕೀಲ ಸತ್ಯಾನಂದ ಅವರು ಮುಡಾ ಅಕ್ರಮವನ್ನು ಬಯಲಿಗೆಳೆದಿದ್ದು, ಸಚಿವ ಅಂಬರೀಶ್ ಸೇರಿದಂತೆ ಮಂಡ್ಯದ ಹಲವು ಜನಪ್ರತಿನಿಧಿಗಳು ಮತ್ತು ಪ್ರಭಾವಿಗಳು ತಮ್ಮ ಪ್ರಭಾವವನ್ನು ಬಳಸಿ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಈ ಕುರಿತು ತನಿಖೆ ಕೈಗೊಳ್ಳುವಂತೆ ಲೋಕಾಯುಕ್ತ ಪೊಲೀಸರಲ್ಲಿಯೂ ದೂರು ಸಲ್ಲಿಕೆ ಮಾಡಿದ್ದರು.

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

About ಗ.ಕ ವಾರ್ತಾ ವಿಭಾಗ ದುಬೈ, ಗಲ್ಫ್

ಗಲ್ಫ್ ಕನ್ನಡಿಗ ವಾರ್ತಾ ವಿಭಾಗ ದುಬೈ... ಹೆಚ್ಚಿನ ಮಾಹಿತಿಗೆ - Contact: uae@gulfkannadiga.com