ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ 16. 50ರು. ಹೆಚ್ಚಳ; ಜನರ ಆಕ್ರೋಶ

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (2) ಅಭಿಪ್ರಾಯವಿಲ್ಲ (0)

lpg-cylinder

ನವದೆಹಲಿ: ನಿನ್ನೆ ರಾತ್ರಿಯಷ್ಟೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಶಾಕ್ ನೀಡಿದ್ದ ಕೇಂದ್ರ ಸರ್ಕಾರ ಇಂದು ಸಬ್ಸಿಡಿ ರಹಿತ ಎಲ್‌ಪಿಜಿ ದರ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದೆ.

ಪ್ರತಿ ಸಿಲಿಂಡರ್ ದರ 16.50 ಹೆಚ್ಚಳವಾಗಿದ್ದು, ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಇರಾಕ್ ಆಂತರಿಕ ಆಂತರಿಕ ಬಿಕ್ಕಟ್ಟಿನ ಪರಿಣಾಮ ಎಲ್‌ಪಿಜಿ ದರ ಏರಿಕೆಗೆ ಕಾರಣ ಎನ್ನಲಾಗಿದೆ.

ಕಳೆದ ತಿಂಗಳು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್‌ಗೆ 23.50ರುಪಾಯಿ ಕಡಿತಗೊಳಿಸಿತ್ತು.
ಇರಾಕ್‌ನಲ್ಲಿ ಐಎಸ್‌ಐಎಸ್ ಉಗ್ರರ ದಾಳಿಯಿಂದಾಗಿ ಕಚ್ಚಾ ತೈಲ ಆಮದಿನಲ್ಲಿ ಏರುಪೇರು ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ.

ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಹಣದುಬ್ಬರ ಮತ್ತು ಬೆಲೆ ಏರಿಕೆಯನ್ನು ಕಡಿಮೆ ಮಾಡುವ ಭರವಸೆ ನೀಡಿದ್ದ ಪ್ರಧಾನಿ ಮೋದಿ ಅವರು, ಇದೀಗ ಒಂದೊಂದೆ ಪದಾರ್ಥಗಳ ಬೆಲೆ ಏರಿಕೆ ಮಾಡಿ ಜನರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (2) ಅಭಿಪ್ರಾಯವಿಲ್ಲ (0)

About ಗ.ಕ ವಾರ್ತಾ ವಿಭಾಗ ದುಬೈ, ಗಲ್ಫ್

ಗಲ್ಫ್ ಕನ್ನಡಿಗ ವಾರ್ತಾ ವಿಭಾಗ ದುಬೈ... ಹೆಚ್ಚಿನ ಮಾಹಿತಿಗೆ - Contact: uae@gulfkannadiga.com