ವಿರಾಟ್ ಕೊಹ್ಲಿ ಗೆ ಐಸಿಸಿ ವರ್ಷದ ಶ್ರೇಷ್ಠ ಏಕದಿನ ಕ್ರಿಕೆಟಿಗ ಪ್ರಶಸ್ತಿ

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

ಕೊಲಬೊ: ಕಳೆದ 12 ತಿಂಗಳಿಂದ ಭಾರತ ಕ್ರಿಕೆಟ್ ತಂಡದಲ್ಲಿ ಯಶಸ್ಸಿನ ಮೆಟ್ಟಿಲೇರಿ ತಂಡಕ್ಕೆ ನೆರವಾದ ವಿರಾಟ್ ಕೊಹ್ಲಿ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವರ್ಷದ ಶ್ರೇಷ್ಠ ಏಕದಿನ ಕ್ರಿಕೆಟಿಗ ಪ್ರಶಸ್ತಿ ನೀಡಿ ಗೌರವಿಸಿದೆ.

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕಾರ ಐಸಿಸಿ ವರ್ಷದ ಕ್ರಿಕೆಟಿಗ ಸೇರಿದಂತೆ ಮೂರು ಪ್ರಶಸ್ತಿಗಳನ್ನು ಗೆದ್ದುಕೊಂಡರು.ಪೀಪಲ್ಸ್ ಚಾಯ್ಸ್ ಅವಾರ್ಡ್ ಜೊತೆಗೆ ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಯನ್ನೂ ಸಂಗಕ್ಕಾರ ತಮ್ಮದಾಗಿಸಿಕೊಂಡರು.

ಪ್ರಶಸ್ತಿಗೆ ಪರಿಗಣಿಸಲ್ಪಟ್ಟ ಅವಧಿಯಲ್ಲಿ 23 ವರ್ಷದ ಕೊಹ್ಲಿ, 31 ಏಕದಿನ ಪಂದ್ಯಗನ್ನಾಡಿ, 1733 ರನ್ ಗಳಿಸಿದ್ದಾರೆ. ಇದರಲ್ಲಿ 8 ಶತಕ, 6 ಅರ್ಧ ಶತಕ ಸೇರಿದೆ. ಒಟ್ಟು ಸರಾಸರಿ 66.65. ಮಾರ್ಚ್ 18ರಂದು ನಡೆದ ಏಷ್ಯಕಪ್‌ನಲ್ಲಿ 183 ರನ್ ಗಳಿಸುವ ಮೂಲಕ ಕೊಹ್ಲಿ ವೈಯಕ್ತಿಕ ಗರಿಷ್ಠ ಮೊತ್ತ ದಾಖಲಿಸಿದರು.

50 ಓವರ್‌ಗಳ 90 ಪಂದ್ಯಗಳಲ್ಲಿ ಕೊಹ್ಲಿ ಇದುವರೆಗೆ 3886 ರನ್ ಗಳಿಸಿದ್ದಾರೆ. 10 ಟೆಸ್ಟ್ ಪಂದ್ಯಗಳಲ್ಲಿ 703 ರನ್ ಗಳಿಸಿ ಗಮನ ಸೆಳೆದಿದ್ದಾರೆ. ಟೆಸ್ಟ್‌ನಲ್ಲಿ 2 ಶತಕ ಹಾಗೂ 5 ಅರ್ಧಶತಕಗಳನ್ನೂ ದಾಖಲಿಸಿದ್ದಾರೆ. 116 ಅವರ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)
ಅಶ್ವಿನಿ

About ಅಶ್ವಿನಿ