ಡಿ. 14 ಮತ್ತು 15ರಂದು ಅಬುದಾಬಿಯಲ್ಲಿ ಸಾಂಸ್ಕೃತಿಕ ಸಮ್ಮೇಳನ: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಿಂದ ಉದ್ಘಾಟನೆ

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು: ಅಬುದಾಬಿ ಕರ್ನಾಟಕ ಸಂಘವು ಡಿ. 14 ಮತ್ತು 15ರಂದು ಅಬುದಾಬಿಯಲ್ಲಿ ’9ನೇ ವಿಶ್ವಕನ್ನಡ ಸಾಂಸ್ಕೃತಿಕ ಸಮ್ಮೇಳ’ ಆಯೋಜಿಸಿದೆ.

ದೇಶದ ನಾನಾ ಭಾಗಗಳಿಂದ ನೂರಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡ ಸಾಂಸ್ಕೃತಿಕ ನಿಯೋಗ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಡಿ.14ರಂದು ಬೆಳಗ್ಗೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಮ್ಮೇಳನ ಉದ್ಘಾಟಿಸಲಿದ್ದು, ಡಿ.15ರ ಸಮಾರೋಪದಲ್ಲಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಚಿವ ಸಿ.ಟಿ.ರವಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಮ್ಮೇಳನದ ಅಂಗವಾಗಿ ವಿಶೇಷ ಸಂಚಿಕೆ ಹೊರಬರಲಿದ್ದು, ಅನಿವಾಸಿ ಕನ್ನಡಿಗರಿಂದ ಅಂತಾರಾಷ್ಟ್ರೀಯ ಬಾಂಧವ್ಯ ಬಿಂಬಿಸುವ ಲೇಖನ, ಕವನ, ಕಥೆಗಳನ್ನು ಆಹ್ವಾನಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (0) ಸಮ್ಮತ (0) ಅಸಮ್ಮತ (0) ಖಂಡನೆ (0) ಅಭಿಪ್ರಾಯವಿಲ್ಲ (0)
ಜಯಪ್ರಕಾಶ್ ಕಿಣಿ

About ಜಯಪ್ರಕಾಶ್ ಕಿಣಿ